೧೯೩೨ ರಲ್ಲಿ ಅಚ್ಚಾದ ಒಂದು ಪತ್ತೇದಾರಿ ನೀಳ್ಗತೆಯೊಂದನ್ನು ನಾನು ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದ ಈ ಕೊಂಡಿಯಲ್ಲಿ ಇಳಿಸಿಕೊಂಡು ಓದಿದೆ. ಅದರ ಹೆಸರು - ಎರಡೆರಡು ಹೆಸರು ಕೊಡುವ ಹಳೆಯ ವಾಡಿಕೆಯಂತೆ - "ಮಗನೇ ಅಲ್ಲ!! ಅಥವಾ ವಿಚಿತ್ರ ಕಾರಸ್ಥಾನ !" ಧಾರವಾಡದ ಬಳಿಯ ಆನಂದವನ, ಅಗಡಿಯ ಶ್ರೀ ಶೇಷಾಚಲ ಪ್ರೆಸ್ಸ್ ಮತ್ತು ಗ್ರಂಥಮಾಲೆಯ ಪ್ರಕಟಣೆ ಇದು. ಕನ್ನಡ, ದೇವನಾಗರೀ, ರೋಮನ್ ಲಿಪಿಗಳಲ್ಲಿ ಪ್ರಕಾಶನ ಸಂಶೆಯ ಹೆಸರನ್ನು ಬರೆದಿದ್ದಾರೆ . ಅಡಿಯಲ್ಲಿ - ಮರಾಠಿಯಲ್ಲಿ ' ಹೇ ಪುಸ್ತಕ ಬಿ.ಪ.ಕಾಳೆ , ಯಾನೀ ಅನಂದವನ-ಅಗಡಿ ಯೇಥೀಲ ಆಪಲ್ಯಾ ಶ್ರೀ ಶೇಷಾಚಲ ಛಾಪಖಾನ್ಯಾತ ಛಾಪಿಲೆ' ಅಂತ ಮರಾಠಿ-ದೇವನಾಗರಿಯಲ್ಲಿ ಮುದ್ರಿಸಿದ್ದಾರೆ! ಇದು ಸದ್ಬೋಧಚಂದ್ರಿಕೆಯ 'ಆಷಾಢ ಶಕೆ ೧೮೫೪, july 1932'ರ ನಾಲ್ಕನೇ ಸಂಚಿಕೆ . ಈ ಅಗಡಿಯ ಶೇಷಾಚಲ ಸಂಸ್ಥೆ, ಅಲ್ಲಿಯ ಶೇಷಾಚಲ ಸಾಧುಗಳು ಮಾಡಿದ ಕನ್ನಡ ಸೇವೆ ಅಪಾರವಾಗಿದ್ದಿರಬೇಕು. ಇರಲಿ. ಈ ಪುಸ್ತಕವನ್ನು ತಿರುವಿ ಹಾಕಿದಾಗ ...... ಈ ಕತೆಯು ೨೫ ಪುಟಗಳದ್ದು. ಪ್ರತಿ ಅಧ್ಯಾಯಕ್ಕೆ ಒಂದು ತಲೆಬರಹ - ಮತ್ತು ಒಂದು ಅಡಿಬರಹ . ಆ ತಲೆಬರಹಗಳು , ಅಡಿಬರಹಗಳು , ಒಳಗಿನ ಹೂರಣ ಏನೆಂದು ನೋಡೋಣ ಬನ್ನಿ . ೧) ಇದ್ದ ಮೂವರಲ್ಲಿ ಕದ್ದವರಾರು ? - (ರವಿಕಾಣದುದಂ ಕವಿ ಕಾಂಬಂ) ಒಂದು ಬ್ಯಾಂಕು , ಅಲ್ಲಿ ತಿಜೋರಿ , ಅದನ್ನು ತೆಗೆಯಬಲ್ಲವರು ಇಬ್ಬರು , ಮ್ಯಾನೇಜರೂ ...
Comments